ಹಾಸ್ಟೆಲ್‌ಗಳಿಗೆ ಆರೋಗ್ಯ ಇಲಾಖೆ ಕಣ್ಗಾವಲು !!  ➤ ಆಹಾರ ಸುರಕ್ಷತೆ ಕಾಪಾಡಲು ಕಟ್ಟುನಿಟ್ಟಿನ ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.13. ಹಾಸ್ಟೆಲ್‌ಗಳಲ್ಲಿ ಪದೇ ಪದೇ ವಿಷಾಹಾರ ಸೇವನೆ ಪ್ರಕರಣಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜಿನ ಹಾಸ್ಟೆಲ್‌ಗಳ ಮೇಲೆ ನಿಗಾ ಇಡಲು ಆರೋಗ್ಯ ಇಲಾಖೆ ಮುಂದಾಗಿದೆ. ವಿಶೇಷವಾಗಿ ಹಾಸ್ಟೆಲ್‌ಗಳಲ್ಲಿರುವ ವಿದ್ಯಾರ್ಥಿಗಳ ಆರೋಗ್ಯದ ಕುರಿತು ನಿಗಾ ವಹಿಸಲಿದ್ದು, ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ ಆಹಾರ, ನೀರಿನ ಗುಣಮಟ್ಟದ ಪರಿಶೀಲನೆಯನ್ನು ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಮಂಗಳೂರಿನಲ್ಲಿ ಇತ್ತೀಚೆಗೆ ಖಾಸಗಿ ಆಸ್ಪತ್ರೆಯ ಹಾಸ್ಟೆಲ್‌ನ ವಿದ್ಯಾರ್ಥಿಗಳು ಫುಡ್‌ ಪಾಯಿಸನ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ದೊಡ್ಡ ಸುದ್ದಿಯಾಗಿತ್ತು. ಒಂದು ಹಾಸ್ಟೆಲ್‌ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಂತೆ ಮತ್ತೊಂದು ಕಾಲೇಜು ಹಾಸ್ಟೆಲ್‌ನಲ್ಲಿಇಂತದ್ದೇ ಸಮಸ್ಯೆ ಉದ್ಬವವಾಗಿದೆ.

Also Read  ಕಡಬ ತಾಲೂಕು ಕಛೇರಿ ಎದುರು ಕಸ್ತೂರಿ ರಂಗನ್ ವರದಿ ಅನುಷ್ಠಾನದ ವಿರುದ್ದ ಬೃಹತ್ ಪ್ರತಿಭಟನೆ

error: Content is protected !!
Scroll to Top