ಮೇಲಾಧಿಕಾರಿಗಳ ಕಿರುಕುಳ ಆರೋಪಿಸಿ ಶಿಕ್ಷಕ ಆತ್ಮಹತ್ಯೆ ಪ್ರಕರಣ !!       ➤ನಾಲ್ವರು ಅಮಾನತು

(ನ್ಯೂಸ್ ಕಡಬ)newskadaba.com ವಿಜಯಪುರ, ಫೆ.14. ಮೇಲಾಧಿಕಾರಿಗಳ ಕಿರುಕುಳ ಆರೋಪಿಸಿ ಶಿಕ್ಷಕರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮಾನಸಿಕ ಕಿರುಕುಳ ತಾಳದೆ ಭಾನುವಾರ ರಾತ್ರಿ ಸಾಸಾಬಾಳ ಗ್ರಾಮದ ಸರ್ಕಾರಿ ಎಚ್​ಪಿಎಸ್ ಶಾಲೆಯ ಮುಖ್ಯೋಪಾಧ್ಯಾಯರಾದ ಬಸವರಾಜ ಮಲ್ಲಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದರು.

ತನ್ನ ಸಾವಿನ ಬಗ್ಗೆ ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಕೆಲ ಮೇಲಾಧಿಕಾರಿಗಳು ತನಗೆ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂಬುದಾಗಿ ಅವರ ಹೆಸರನ್ನು ಉಲ್ಲೇಖಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ವರದಿ ತಿಳಿಸಿದೆ.

Also Read  ರಸ್ತೆ ಅಪಘಾತ ➤ ಬಾಲಕಿ ಸ್ಥಳದಲ್ಲೇ ಮೃತ್ಯು..!!!

 

 

error: Content is protected !!
Scroll to Top