ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್➤ ಇಂಜಿನಿಯರಿಂಗ್ ವಿದ್ಯಾರ್ಥಿಗೆ 5 ವರ್ಷ ಜೈಲು ಶಿಕ್ಷೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.14 ಫೆಬ್ರವರಿ 14, 2019 ರಂದು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಾಳಿ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬೆಂಗಳೂರಿನ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗೆ ಎನ್ಐಎ ವಿಶೇಷ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಎನ್‌ಐಎ ನ್ಯಾಯಾಲಯ ಶಿಕ್ಷೆ ವಿಧಿಸಿದ್ದು, 5 ವರ್ಷಗಳ ಸಾಮಾನ್ಯ ಜೈಲು ಶಿಕ್ಷೆಯೊಂದಿಗೆ 10,000 ರೂ. ದಂಡ ವಿಧಿಸಿದೆ. ಎಚ್ ಆರ್ ಬಿಆರ್ ಲೇಔಟ್ ನಿವಾಸಿ ಫೈಜ್ ರಶೀದ್ ಎಂಬಾತನೇ ಶಿಕ್ಷೆಗೆ ಗುರಿಯಾಗಿರುವ ವಿದ್ಯಾರ್ಥಿ. ಭಯೋತ್ಪಾದಕ ದಾಳಿಯ ಬಗ್ಗೆ ಪ್ರಚೋದನಕಾರಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡಲು ರಶೀದ್ ಫೇಸ್‌ಬುಕ್ ಖಾತೆಯನ್ನು ರಚಿಸಿದ್ದ ಎಂದು ವರದಿಯಾಗಿದೆ. ಸಿಸಿಬಿ ಪೊಲೀಸರು ರಶೀದ್ ನನ್ನು ಆತನ ಮನೆ ಸಮೀಪದ ಬೇಕರಿಯಿಂದ ಬಂಧಿಸಿದ್ದರು.

error: Content is protected !!

Join the Group

Join WhatsApp Group