ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಜಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ಅಪಾರ್ಟ್ ಮೆಂಟ್ ನ 5ನೇ ಮಹಡಿಯಿಂದ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ.

ವಿದ್ಯಾರಣ್ಯಾಪುರದ ಎನ್ ಐಟಿ ಜಂಕ್ಷನ್ ಬಳಿ ಅಪಾರ್ಟ್ ಮೆಂಟ್ ನ ಸುಚಿರ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ. ತಂದೆ ಅಮೆರಿಕದಲ್ಲಿ ಉದ್ಯೋಗದಲ್ಲಿದ್ದು, ಸುಚಿರ್, ತಾಯಿ ಜೊತೆ ಬೆಂಗಳೂರಿನಲ್ಲಿ ಕೆಲವು ವರ್ಷಗಳಿಂದ ವಾಸವಾಗಿದ್ದ.

ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಖಿನ್ನತೆಯಿಂದ ಬಳುತ್ತಿದ್ದ ಸುಚಿರ್ ಈ ಹಿಂದೆಯೂ ಹಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ. ಮೃತದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿದ್ಯಾರಣ್ಯಾಪುರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Also Read  ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್‌ ದ.ಕ ಜಿಲ್ಲಾ ಸಮಿತಿ ವತಿಯಿಂದ ಪುಂಜಾಲಕಟ್ಟೆಯಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ

 

error: Content is protected !!
Scroll to Top