(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.15. ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ.
ಬಿಹಾರ ಮೂಲದ ಪ್ರಸ್ತುತ ಮೇರಮಜಲು ಬಾಡಿಗೆ ಮನೆ ನಿವಾಸಿ ಬಬ್ಲು (36) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ಹೊರವಲಯದ ಮೇರಮಜಲು ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಯೊಂದರ ಒಂದನೇ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.