ಆ್ಯಂಬುಲೆನ್ಸ್-ಟೆಂಪೊ ನಡುವೆ ಢಿಕ್ಕಿ ➤‌ 8 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.comಹುಬ್ಬಳ್ಳಿ,ಫೆ.15. ಆ್ಯಂಬುಲೆನ್ಸ್​​ ಮತ್ತು ಟೆಂಪೋ ನಡುವೆ ಭೀಕರ ಅಪಘಾತ ಸಂಭವಿಸಿ ಆ್ಯಂಬುಲೆನ್ಸ್ ಚಾಲಕ ಸೇರಿ 8ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಬಳಿ ಸಂಭವಿಸಿದೆ.

ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಕ್ತರು ಟೆಂಪೋ ವಾಹನದಲ್ಲಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದು ರಾಣೆಬೆನ್ನೂರಿಗೆ ಹೊರಟಿದ್ದು, ಆ್ಯಂಬುಲೆನ್ಸ್​​​​ ಗದಗ ನಗರದಿಂದ ಹುಬ್ಬಳ್ಳಿಯ ಕಿಮ್ಸ್​ಗೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

 

Scroll to Top