(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ.26. ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ್ ಹೆಗ್ಡೆ ನಾಲಿಗೆ ಕಡಿದು ತಂದವರಿಗೆ ಒಂದು ಕೋಟಿ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಮಾಜಿ ಜಿಪಂ ಸದಸ್ಯ ಗುರುಶಾಂತ್ ಪಟ್ಟೇದಾರ್ ವಿವಾದ್ಮಾತಕ ಹೇಳಿಕೆ ನೀಡಿದ್ದಾರೆ.
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಗೊಬ್ಬುರ (ಬಿ) ಮಾಜಿ ಜಿಪಂ ಸದಸ್ಯರಾಗಿರುವ ಗುರುಶಾಂತ್ ಜನವರಿ 26 ರೊಳಗೆ ಅನಂತಕುಮಾರ್ ಹೆಗ್ಡೆ ಅವರ ನಾಲಿಗೆಯನ್ನು ಕಡಿದು ತಂದು ಕೊಡಬೇಕು ಎಂದು ಷರತ್ತು ಹಾಕಿದ್ದಾರೆ. ಈ ದೇಶದಲ್ಲಿ ಎಲ್ಲಾ ಧರ್ಮದ ಜನರು ಶಾಂತಿಯಿಂದ ಬದುಕುತ್ತಿದ್ದು, ಬಿಜೆಪಿ ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ದೇಶದಲ್ಲಿರುವ ಜಾತ್ಯಾತೀತರಿಗೆ ಅವಮಾನ ಮಾಡಿದ್ದಾರೆ. ಭಾರತೀಯ ಸಂವಿಧಾನದ ವಿರೋಧ ಮಾಡುವವರೆಲ್ಲ ದೇಶದ್ರೋಹಿಗಳು. ವಿವಾದಾತ್ಮಕ ಹೇಳಿಕೆಗಳನ್ನು ನೀಡುವ ಮಂತ್ರಿಗಳ ಮೇಲೆ ಪ್ರಧಾನಿ ಮೋದಿಯವರು ಹಿಡಿತ ಕಾಯ್ದುಕೊಳ್ಳಬೇಕು ಎಂದು ಗುರುಶಾಂತ್ ಪಟ್ಟೇದಾರ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
ಕೊಪ್ಪಳ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನಂತಕುಮಾರ್ ಹೆಗ್ಡೆ ಅಪ್ಪ-ಅಮ್ಮ ಯಾರೆಂಬುದು ಗೊತ್ತಿಲ್ಲದವರು ಜಾತ್ಯಾತೀತರು ಎಂದು ಹೇಳಿಕೆಯನ್ನು ನೀಡಿದ್ದರು. ಸಚಿವರ ಈ ಹೇಳಿಕೆಗೆ ಉತ್ತರವಾಗಿ ಆಗಿ ಪಟ್ಟೇದಾರ್ ಈ ಹೇಳಿಕೆ ನೀಡಿದ್ದಾರೆ.