ಬಿಬಿಸಿ ಮೇಲೆ ಐಟಿ ದಾಳಿ ➤ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ!

(ನ್ಯೂಸ್ ಕಡಬ) newskadaba.com. ಕೋಲ್ಕತಾ, ಫೆ.15. ಬಿಬಿಸಿ ಇಂಡಿಯಾದ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಸಮೀಕ್ಷೆ ದಾಳಿ ನಡೆಸಿರುವುದು ಅತ್ಯಂತ ದುರದೃಷ್ಟಕರ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ ಅಸೆಂಬ್ಲಿಯಲ್ಲಿ ಹೇಳಿದರು.  ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಸೇಡು ಎಂದು ಆರೋಪಿಸಿದ್ದಾರೆ.

ಇಂತಹ ಕ್ರಮಗಳು ಪತ್ರಿಕಾ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತವೆ, ಬಿಜೆಪಿ ಪಕ್ಷವು ಮಾಧ್ಯಮವನ್ನು ನಿಯಂತ್ರಿಸುತ್ತಿದೆ. ಒಂದು ದಿನ ದೇಶದಲ್ಲಿ ಮಾಧ್ಯಮವೇ ಇಲ್ಲದಂತೆ ಮಾಡುತ್ತಾರೆ ಎಂದು ಪಶ್ಚಿಮ ಬಂಗಾಳ ಸಿಎಂ ವಾಗ್ದಾಳಿ ನಡೆಸಿದರು.

Also Read  ಐಪಿಎಲ್: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಯುವರಾಜ್ ಸಿಂಗ್ ಆಗಮನ

ಭಾರತದಲ್ಲಿ ಬ್ರಿಟಿಷ್ ಬ್ರಾಡ್‌ಕಾಸ್ಟರ್ ವಿರುದ್ಧ ಆಪಾದಿತ ತೆರಿಗೆ ವಂಚನೆಯ ತನಿಖೆಯ ಭಾಗವಾಗಿ ತೆರಿಗೆ ಇಲಾಖೆಯು ಮಂಗಳವಾರ ಬಿಬಿಸಿಯ ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಸಮೀಕ್ಷೆಯನ್ನು ಪ್ರಾರಂಭಿಸಿದೆ.

error: Content is protected !!
Scroll to Top