ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ     ➤ ಮಂಗಳೂರಿನ‌ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.16. ರೈಲಿಗೆ ಹತ್ತುವಾಗ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕುಂಬಳೆಯಲ್ಲಿ ನಡೆದಿದೆ.

ಮೊಗ್ರಾಲ್ ಚಲಿಯಂಗೋಡಿನ ಅಕ್ಬರ್ ಅಲಿ (18) ಗಾಯಗೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ.

ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಅಕ್ಬರ್ ಅಲಿ ಬೆಳಿಗ್ಗೆ ಕುಂಬಳೆ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತುವಾಗ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಬರ್ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

 

 

Scroll to Top