ಚಾಕೋಲೇಟ್ ಆಸೆ ತೋರಿಸಿ ಬಾಲಕಿಯ ಮೇಲೆ ಅತ್ಯಾಚಾರ

(ನ್ಯೂಸ್ ಕಡಬ) newskadaba.com ದಾವಣಗೆರೆ, ಫೆ.16. ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದನ್ನ ಗಮನಿಸಿದ ಆರೋಪಿ, ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ ದೇವಸ್ಥಾನದ ಬಳಿ ಕರೆದುಕೊಂಡು ಹೋಗಿ ಬಾಯಿಗೆ ಬಟ್ಟೆ ಹಾಕಿ ಅತ್ಯಾಚಾರ ಮಾಡಿದ್ದಾನೆ.

ಬಾಲಕಿಯನ್ನು ಮನೆಯಲ್ಲಿ ಬಿಟ್ಟು ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ದೇವಸ್ಥಾನದ ಬಳಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎಂದು ವರದಯಾಗಿದೆ.

Scroll to Top