(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.16. ಸ್ಮಾರ್ಟ್ಫೋನ್ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಸಂಪಾದಿಸಿರುವ ವಿವೋ ಒಡೆತನದ ಐಕ್ಯೂ ಕಂಪನಿ ಇದೀಗ ಹೊಸ ಫೋನ್ನೊಂದಿಗೆ ಮತ್ತೆ ಮರುಕಟ್ಟೆಗೆ ಬಂದಿದೆ. ಕಳೆದ ವರ್ಷ ಐಕ್ಯೂ ನಿಯೋ 6 (iQOO Neo 6) ಎಂಬ ಫೋನನ್ನು ಬಿಡುಗಡೆ ಮಾಡಿ ಸದ್ದು ಮಾಡಿದ್ದ ಕಂಪನಿ ಇದೀಗ ಇದರ ಮುಂದುವರೆದ ಭಾಗವಾಗಿ ಐಕ್ಯೂ ನಿಯೋ 7 ಸ್ಮಾರ್ಟ್ಫೋನ್ ಅನ್ನು ಭಾರತದಲ್ಲಿ ರಿಲೀಸ್ ಮಾಡಿದೆ.
ತನ್ನ ಫಾಸ್ಟ್ ಚಾರ್ಜರ್ನಿಂದ ಟೆಕ್ ಪ್ರಿಯರ ನಿದ್ದೆಗೆಡಿಸಿರುವ ಈ ಫೋನ್ನಲ್ಲಿ ಬಲಿಷ್ಠವಾದ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ ಕೂಡ ನೀಡಲಾಗಿದೆ ಎಂದು ತಿಳಿಸಿದೆ.