ಕಡಬ: ಗಾಂಜಾ ಸೇವಿಸಿ ತೂರಾಟ      ➤ ವ್ಯಕ್ತಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಡಬ, ಫೆ.17. ಕಡಬ ತಾಲೂಕು ಕಳಾರದ ಅಂಗಡಿಯೊಂದರ ಬಳಿ ಗಾಂಜಾ ಸೇವಿಸಿ ತೂರಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕಡಬ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೋಡಿಂಬಾಳ ಗ್ರಾಮದ ಕುತ್ಯಾಡಿ ನಿವಾಸಿ  ಮಿರ್ಷಾದ್ (35) ಬಂಧಿತ ಅರೋಪಿ ಎಂದು ಗುರುತಿಸಲಾಗಿದೆ.

ಫೆ.15 ರಂದು ಠಾಣಾ ಎಸ್.ಐ  ಸಿಬ್ಬಂದಿಗಳ ಜೊತೆಗೆ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್‌ ಕರ್ತವ್ಯದಲ್ಲಿರುವಾಗ ಕಳಾರ ಎಂಬಲ್ಲಿ ಕುಲ್ಕಿ ಜ್ಯೂಸ್‌ ಅಂಗಡಿ ಎದುರು ವ್ಯಕ್ತಿಯೋರ್ವ ರಸ್ತೆಯಲ್ಲಿ ತೂರಾಡುತ್ತಿದ್ದ ವೇಳೆ ವಿಚಾರಿಸಿದಾಗ ಯಾವುದೋ ಅಮಲು ಪದಾರ್ಥ ಸೇವನೆ ಮಾಡಿರುವ ಬಗ್ಗೆ ಮೇಲ್ನೋಟಕ್ಕೆ ಕಂಡು ಬಂದಿದೆ.

 

 

Scroll to Top