ಭಾರತೀಯ ಕ್ರಿಕೆಟ್ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಚೇತನ್ ಶರ್ಮಾ ರಾಜೀನಾಮೆ!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.17. ಭಾರತೀಯ ಕ್ರಿಕೆಟ್ ತಂಡದ ಒಳ ಸಂಗತಿಗಳನ್ನು ಖಾಸಗಿ ಟಿವಿಯ ರಹಸ್ಯ ಕಾರ್ಯಾಚರಣೆಯಲ್ಲಿ ಬಾಯಿಬಿಟ್ಟಿದ್ದ ತಂಡದ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ.

ಚೇತನ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ಮಂಡಳಿ ಕಾರ್ಯದರ್ಶಿ ಜಯ್ ಶಾ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

Scroll to Top