(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.18. ಕರಾವಳಿಯಾದ್ಯಂತ ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿಗಳು ಆರಂಭಗೊಂಡಿವೆ. ಶಿವ ದೇವಸ್ಥಾನಗಳಲ್ಲಿ ಮುಂಜಾನೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ.
ದಕ್ಷಿಣ ಕನ್ನಡ, ಉಡುಪಿಯ ವಿವಿಧ ಶಿವ ದೇವಸ್ಥಾನಗಳಲ್ಲಿ ಭಕ್ತಿ, ಸಂಭ್ರಮದಿಂದ ಶಿವರಾತ್ರಿ ಆಚರಣೆ ನಡೆಯುತ್ತಿದೆ. ಶಿವ ದೇವಸ್ಥಾನ ಸೇರಿದಂತೆ ವಿವಿಧ ದೇವಳಗಳಲ್ಲಿ ಶಿವನಿಗೆ ಅಭಿಷೇಕ, ವಿಶೇಷ ಪೂಜೆ, ಅರ್ಚನೆಗಳು ನಡೆಯುತ್ತಿವೆ.