ಕಡಬ: ಬೆಳ್ಳಂಬೆಳಗ್ಗೆ ಕಾಡಾನೆ ದಾಳಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಫೆ. 20. ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ಸೋಮವಾರದಂದು ನಡೆದಿದೆ.

 


ಮೃತರನ್ನು ರಂಜಿತಾ ಹಾಗೂ ರಮೇಶ್ ಎಂದು ಗುರುತಿಸಲಾಗಿದೆ. ರಂಜಿತಾರವರು ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿದ್ದು, ಮನೆಯಿಂದ ಸೊಸೈಟಿಗೆ ಹೋಗುತ್ತಿದ್ದ ವೇಳೆ ಕರ್ಮೇಣ ಎಂಬಲ್ಲಿ ಆನೆ ದಾಳಿ ನಡೆಸಿದೆ. ಇದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೆಯೂ ಆನೆ ಅಟ್ಟಹಾಸ ಮೆರೆದಿದ್ದು, ರಮೇಶ್ ಎಂಬವರು ಸ್ಥಳದಲ್ಲೇ ಮೃತಪಟ್ಟರೆ ರಂಜಿತಾ ಅವರು ನೆಲ್ಯಾಡಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Also Read  ಕಡಬ: ಪತ್ರಕರ್ತರ ಮೇಲಿನ ಹಲ್ಲೆ ಖಂಡಿಸಿ ಸೂಕ್ತ ಕ್ರಮಕ್ಕೆ ಆಗ್ರಹ ➤ ತಾಲೂಕು ಪತ್ರಕರ್ತರ ಸಂಘದಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ

 

error: Content is protected !!