ಕ್ಷುಲ್ಲಕ ಕಾರಣಕ್ಕೆ 10 ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಫೆ.21. 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ತಾನು ಕೇಳಿದಾಗ ತಾಯಿ ಮೊಬೈಲ್ ಕೊಡಲಿಲ್ಲ ಎಂಬ ಸಿಟ್ಟಿನಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರದಂದು ಮೂಡುಬಿದಿರೆಯ ವಾಲ್ಪಾಡಿ ಗ್ರಾಮದ ನಾಗದಡ್ಕದಲ್ಲಿ ಸಂಭವಿಸಿದೆ.

ಉಮೇಶ್ ಪೂಜಾರಿ ಎಂಬವರ ಪುತ್ರಿ ಯುತಿ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಎಂದು ಗುರುತಿಸಲಾಗಿದೆ. ಈಕೆ ಅಳಿಯೂರು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾಳೆ ಎನ್ನಲಾಗಿದೆ.

 

Scroll to Top