ಕಡಬದಲ್ಲಿ ಆನೆ ದಾಳಿ ಪ್ರಕರಣ; ವಿಧಾನ ಸಭೆ ಅಧಿವೇಶನದ ವಿಷಯ ಪ್ರಸ್ತಾಪ ➤ ಶಾಸಕ ಯು.ಟಿ ಖಾದರ್

(ನ್ಯೂಸ್ ಕಡಬ)newskadaba.com ಕಡಬ, ಫೆ. 21. ಆನೆ ದಾಳಿಯಿಂದ ಪ್ರಾಣ ಕಳೆದುಕೊಂಡ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿದ್ದೀರಿ. ಎಲ್ಲರ ಜೀವಕ್ಕೆ ಬೆಲೆ ಇದೆ ಆದರೆ, ಬೇರೆ ಕಡೆ ನೀಡುವಂತೆ ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಬೇಕೆಂದು ಉಳ್ಳಾಲ ಶಾಸಕ ಯು.ಟಿ.ಖಾದರ್ ರವರು ಸದನದ ಗಮನ ಸೆಳೆದರು.


ವಿಧಾನಸಭೆ ಅಧಿವೇಶನದ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಖಾದರ್ ಅವರು, ಯುವತಿಯ ರಕ್ಷಣೆಗೆ ಮುಂದಾದ ರಮೇಶ್ ರೈ ಎಂಬವರು ಜೀವ ಕಳೆದುಕೊಂಡಿದ್ದಾರೆ. ಅವರಿಗೆ ಪರಿಹಾರದ ಜೊತೆಗೆ ಸರ್ಕಾರ ಶೌರ್ಯ ಪ್ರಶಸ್ತಿ ಘೋಷಣೆ ಮಾಡಬೇಕು. ಇದು ಬೇರೆಯವರಿಗೆ ಪ್ರೇರಣೆಯಾಗಲಿದೆ ಎಂದರು.

Also Read  ಪುತ್ತೂರು: ಕಾಲೇಜು ವಿದ್ಯಾರ್ಥಿನಿಯ ಗ್ಯಾಂಗ್ ರೇಪ್ ➤ ಐವರು ಆರೋಪಿಗಳ ಬಂಧನ

error: Content is protected !!
Scroll to Top