ಲಿವ್-ಇನ್ ಹತ್ಯೆ ➤ ಬೆಂಕಿ ಹಚ್ಚಿ ಕೊಲೆಗೈದ ಪ್ರಿಯಕರ!

(ನ್ಯೂಸ್ ಕಡಬ) newskadaba.com. ನವದೆಹಲಿ.  ಫೆ.21. ಶ್ರದ್ಧಾವಾಕರ್ ಹತ್ಯೆ ಪ್ರಕರಣ ಹಸಿರಾಗಿರುವಂತೆಯೇ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೊಂದು ‘ಲಿವ್-ಇನ್ ಹತ್ಯೆ’ ಪ್ರಕರಣ ಬೆಳಕಿಗೆ ಬಂದಿದ್ದು, ತನ್ನ ಪ್ರಿಯತಮೆಯನ್ನು ಪ್ರಿಯಕರ ಬೆಂಕಿ ಹಚ್ಚಿ ಕೊಲೆಗೈದಿದ್ದಾನೆ.

ವಾಯವ್ಯ ದೆಹಲಿಯ ಅಮನ್ ವಿಹಾರ್‌ನಲ್ಲಿ ಈ ಘಟನೆ ನಡೆದಿದ್ದು, 28 ವರ್ಷದ ವಿವಾಹಿತ ಮಹಿಳೆಯನ್ನು ಆಕೆಯ ಪ್ರಿಯಕರ ಬೆಂಕಿ ಹಚ್ಚಿ ಕೊಂದು ಹಾಕಿದ್ದಾನೆ. ಫೆಬ್ರವರಿ 11 ರಂದು, ಸುಟ್ಟ ಗಾಯಗಳೊಂದಿಗೆ ಮಹಿಳೆಯನ್ನು ಎಸ್‌ಜಿಎಂ ಆಸ್ಪತ್ರೆಗೆ ದಾಖಲಿಸಿದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಪೊಲೀಸರು ಆಸ್ಪತ್ರೆಗೆ ತಲುಪಿದಾಗ, ಮಹಿಳೆ ತನ್ನ ಹೇಳಿಕೆಯನ್ನು ದಾಖಲಿಸಲು ವಿಫಲರಾಗಿದ್ದರು. ಬಳಿಕೆ ಆಕೆಯನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ಮತ್ತು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಏಮ್ಸ್ ಟ್ರಾಮಾ ಸೆಂಟರ್‌ಗೆ ಸ್ಥಳಾಂತರಿಸಲಾಯಿತು. ಆದರೆ ಬಳಿಕ ಆಕೆ ಚಿಕಿತ್ಸೆ ಫಲಿಸದೇ ಆಕೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Scroll to Top