(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 21. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪ ನಡುವಿನ ಜಟಾಪಟಿ ಇದೀಗ ಬೀದಿಗೆ ಬಂದಿದ್ದು, ಈ ಹಿನ್ನೆಲೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ.ರೂಪ ರವರನ್ನು ಸ್ಥಳ ನಿಯೋಜಿಸದೇ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.