ವಿಟ್ಲ ಆಕಸ್ಮಿಕವಾಗಿ ಲಾರಿಗೆ ಬೆಂಕಿ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com. ವಿಟ್ಲ.  ಫೆ.21. ಸಾಲೆತ್ತೂರು ಸಮೀಪದ  ಮೆದು ಎಂಬಲ್ಲಿನ ಪೆಟ್ರೋಲ್ ಬಂಕ್ ಎದುರುಗಡೆ ನಿಲ್ಲಿಸಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿಯ ಮುಂದಿನ ಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅಪಾರ ನಷ್ಟ ಸಂಭವಿಸಿದೆ.

ಪೆಟ್ರೋಲ್ ಬಂಕ್ ಎದುರು ಈ ಘಟನೆ ನಡೆದಿದ್ದು, ಸ್ಥಳೀಯರು ಹರಸಾಹಸಪಟ್ಟು ಬೆಂಕಿ ನಂದಿಸಿ ಹೆಚ್ಚಿನ ಅನಾಹುತವೊಂದನ್ನು ತಪ್ಪಿಸಿದ್ದಾರೆ. ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ್ದಾರೆ.

Scroll to Top