ಮಂಗಳೂರು: ಬೈಕ್ ಅಪಘಾತ; ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com  ಮಂಗಳೂರು, ಫೆ.22. ಬೈಕ್ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಿಜೈ ಚರ್ಚ್ ಹಾಲ್ ಮುಂಭಾಗದ ರಸ್ತೆಯಲ್ಲಿ ನಡೆದಿದೆ.

ಎಸ್.ಡಿ.ಎಂ ಕಾಲೇಜಿನಲ್ಲಿ ಬಿಬಿಎಂ ತೃತೀಯ ವರ್ಷದ ವಿದ್ಯಾರ್ಥಿಯಾಗಿದ್ದ ಕವನ್ ಆಳ್ವ(20) ಮೃತ ಯುವಕ ಎಂದು ಗುರುತಿಲಾಗಿದೆ.

ಆಟೋ ಚಾಲಕನ ನಿರ್ಲಕ್ಷ್ಯದ ತಿರುವು ಮತ್ತು ಹೆಲ್ಮೆಟ್ ರಹಿತ ಪ್ರಯಾಣದ ಕಾರಣ ಅಪಘಾತವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಕದ್ರಿ ಸಂಚಾರಿ ಠಾಣೆಯಲ್ಲಿ ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 

 

Scroll to Top