1 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು ➤ ರೂಪಾಗೆ ಲೀಗಲ್ ನೊಟೀಸ್ ನೀಡಿ ಕೋರ್ಟ್ ಮೆಟ್ಟಿಲೇರಿದ ಅಧಿಕಾರಿ ರೋಹಿಣಿ ಸಿಂಧೂರಿ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.23.  ಕಳೆದ ಕೆಲ ದಿನಗಳಿಂದ ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳಾದ ಡಿ ರೂಪಾ ಮತ್ತು ರೋಹಿಣಿ ಸಿಂಧೂರಿಯವರಿಗೆ ಸಂಬಂಧಿಸಿದ ಸುದ್ದಿಗಳು ಸಾಕಷ್ಟು ಹೊರಬಿದ್ದಿದೆ. ವೃತ್ತಿಪರ ಮಟ್ಟದಿಂದ ವೈಯಕ್ತಿಕ ಮಟ್ಟಕ್ಕೆ ಇವರಿಬ್ಬರ ಆರೋಪ-ಪ್ರತ್ಯಾರೋಪ ಸಾಗಿ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ತೋರಿಸದೆ ವರ್ಗಾವಣೆ ಮಾಡಿದೆ. ಇವರಿಬ್ಬರ ಕಿತ್ತಾಟದಲ್ಲಿ ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ಸರ್ಕಾರ ಬೇರೆ ಇಲಾಖೆಗೆ ವರ್ಗಾಯಿಸಿದೆ.

ಇದೀಗ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಕಾನೂನು ಸಮರಕ್ಕೆ ಕೋರ್ಟ್ ಮೆಟ್ಟಿಲೇರಿದ್ದಾರೆ. ಎರಡು ದಿನಗಳ ಹಿಂದೆ ಬೆಂಗಳೂರಿನ ಬಾಗಲಗುಂಟೆಯ ಪೊಲೀಸ್ ಠಾಣೆಯಲ್ಲಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ರೂಪಾ ವಿರುದ್ಧ ದೂರು ನೀಡಿದ್ದರು. ಆದರೆ ಆಗ ಎಫ್ಐಆರ್ ದಾಖಲಾಗಿರಲಿಲ್ಲ.

Also Read  ಕಛೇರಿಯ ಬಾಡಿಗೆ ಹಣ ನೀಡದೆ ವಂಚಿಸಿ ಕಟ್ಟಡ ಮಾಲಕರಿಗೆ ಬೆದರಿಕೆ ಒಡ್ಡಿದ ಆರೋಪ ➤ ಕಡಬದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲು

ಇದೀಗ ನಿನ್ನೆ ರೋಹಿಣಿ ಸಿಂಧೂರಿಯವರು ಕೋರ್ಟ್ ಮೆಟ್ಟಿಲೇರಿದ್ದು ಅವರ ಪರ ವಕೀಲರು ರೂಪಾ ಅವರಿಗೆ ಲೀಗಲ್ ನೊಟೀಸ್ ಕಳುಹಿಸಿದ್ದಾರೆ. ಅಲ್ಲದೆ ನೊಟೀಸ್ ನಲ್ಲಿ ರೋಹಿಣಿ ಸಿಂಧೂರಿಯವರ ಮಾನಹಾನಿ ಮಾಡುವ ಫೋಟೋಗಳು, ಪೋಸ್ಟ್ ಗಳನ್ನು ಸೋಷಿಯಲ್ ಮೀಡಿಯಾಗಳಿಂದ ತೆಗೆಯುವಂತೆ ರೂಪಾ ಅವರಿಗೆ ಸೂಚಿಸಿದ್ದು, ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ನೊಟೀಸ್ ನಲ್ಲಿ ಆಗ್ರಹಿಸಿದ್ದಾರೆ.

ಅಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ವೈಯಕ್ತಿಕ ಖಾಸಗಿ ಫೋಟೋಗಳು ಮತ್ತು ವಿಚಾರಗಳನ್ನು ಪೋಸ್ಟ್ ಮಾಡುವ ಮೂಲಕ ಮಾನಹಾನಿಯಾಗಿದ್ದು, ತಮಗೆ ಒಂದು ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು  ಒತ್ತಾಯಿಸಿದ್ದಾರೆ.

error: Content is protected !!
Scroll to Top