(ನ್ಯೂಸ್ ಕಡಬ) newskadaba.com. ವಿಟ್ಲ. ಫೆ.23. ವಿಟ್ಲದ ಕಂಬಳಬೆಟ್ಟು ಮಸೀದಿ ಬಳಿ ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ, ವೇಳೆ ಕಾರೊಂದು ಪಲ್ಟಿಯಾದ ಘಟನೆ ಇಂದು ನಡೆದಿದೆ. ಕಾರೊಂದರಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದು, ಈ ವೇಳೆ ಕಾರು ಪಲ್ಟಿಯಾಗಿ ಬಿದ್ದಿದೆ.
ಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳಕ್ಕೆ ಆಗಮಿಸಿದ ವಿಟ್ಲ ಪೊಲೀಸರು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.