ಕಾನೂನು ಬಾಹಿರ ಶಸ್ತ್ರಾಸ್ತ್ರ ತರಬೇತಿ ➤ ಫ್ರೀಡಂ ಕಮ್ಯೂನಿಟಿ ಹಾಲ್‌ NIA ವಶಕ್ಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.23. ಬೆಳ್ಳಾರೆ ಸಮೀಪದ ನೆಟ್ಟಾರ್ ನಿವಾಸಿ ಪ್ರವೀಣ್ ಅವರ ಹತ್ಯೆಗೆ ಸಂಬಂಧಿಸಿದಂತೆ ನಡೆದ ತನಿಖೆಯ ವೇಳೆ ಕಬಕ ಸಮೀಪದ ಇಡ್ಕಿದು ಗ್ರಾಮದ ಮಿತ್ತೂರು ಎಂಬಲ್ಲಿರುವ ಫ್ರೀಡಂ ಕಮ್ಯೂನಿಟಿ ಹಾಲ್‌ನಲ್ಲಿ ಪಾಪ್ಯುಲರ್‌ ಫ್ರಂಟ್‌ ಅಫ್‌ ಇಂಡಿಯಾದ(ಪಿಎಫ್‌ಐ) ಸದಸ್ಯರಿಗೆ ಅನಧಿಕೃತವಾಗಿ ಭಯೋತ್ಪಾದನೆಗೆ ಸಹಕಾರಿಯಾಗುವಂತಹ ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲಾಗುತ್ತಿದೆ.


ಈ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಫ್ರೀಡಂ ಕಮ್ಯೂನಿಟಿ ಹಾಲ್‌ನ್ನು ಸ್ವಾಧೀನ ಪಡಿಸಿಕೊಂಡಿರುವುದಾಗಿ ವರದಿಯಾಗಿದೆ.

Scroll to Top