➤ ಮಾನಸಿಕ ಖಿನ್ನತೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಕುಮಾರಧಾರ ನದಿ ತೀರದಲ್ಲಿ ಶವವಾಗಿ ಪತ್ತೆ!

(ನ್ಯೂಸ್ ಕಡಬ) newskadaba.com. ಆಲಂಕಾರು. ಫೆ.23.  ಕೆಲ ದಿನಗಳ ಹಿಂದೆ ಆಲಂಕಾರಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು  ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಅಲಂಕಾರಿನ ನಿವಾಸಿ ಸೂರಪ್ಪ ಪೂಜಾರಿ (74) ಅವರ ಶವ  ಕುಮಾರಧಾರ ನದಿ ತೀರದಲ್ಲಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅಲಂಕಾರು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದ,  ಇವರು ಸಂಜೆಯಾದರೂ ಮನೆಗೆ ವಾಪಸಾಗದ ಹಿನ್ನೆಲೆಯಲ್ಲಿ ಮನೆಯವರು ಸಂಬಂಧಿಕರ ಮನೆ ಸೇರಿದಂತೆ ಎಲ್ಲಾ ಕಡೆ ವಿಚಾರಿಸಿದ್ದಾರೆ. ಆದರೆ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ

ಬುಧವಾರ ಬೆಳಗ್ಗೆ ಆಲಂಕಾರು ಪೇಟೆಯ ಸಿಸಿ ಕೆಮರಾವನ್ನು ಪರಿಶೀಲಿಸಿದಾಗ ಉಪ್ಪಿನಂಗಡಿ ಕಡೆಗೆ ಹೋಗುವ ಜೀಪಿನಲ್ಲಿ ಸಂಚರಿಸಿದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಅದರಂತೆ ಉಪ್ಪಿನಂಗಡಿಯ ಪೇಟೆಯಲ್ಲಿ ಹುಡುಕಾಡಿದಾಗ ನದಿ ತೀರದಲ್ಲಿ ಶವ ಪತ್ತೆಯಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು  ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top