2006ಕ್ಕೂ ಮುನ್ನ ನೇಮಕಗೊಂಡ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ     ➤  ಸಿಎಂ ಬೊಮ್ಮಾಯಿ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಫೆ.24. ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ 2006ಕ್ಕೂ ಮುನ್ನ ನೇಮಕಗೊಂಡು ಆ ಬಳಿಕ ಕರ್ತವ್ಯಕ್ಕೆ ಹಾಜರಾಗಿದ್ದರೆ ಅಂತಹ ಸರಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್ ಪ್ರಶ್ನೆಗೆ ಉತ್ತರಿಸಿ ಮಾತನಾಡಿದ ಅವರು, 2006ಕ್ಕೂ ಮುನ್ನ ನೇಮಕವಾದವರಿಗೆ ಪಿಂಚಣಿ ವ್ಯವಸ್ಥೆಯಲ್ಲಿ ತಾರತಮ್ಯವಾಗಿದ್ದರೆ ಸರಿಪಡಿಸಲಾಗುತ್ತದೆ. 2006ರ ಎಪ್ರಿಲ್ 1ರಿಂದ ಆಯ್ಕೆಯಾದ ಎಲ್ಲ ಸರಕಾರಿ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ ಎಂದರು.

Also Read  ಸಿರಿಯಾ ಅಧ್ಯಕ್ಷ ಪಲಾಯನ

 

error: Content is protected !!
Scroll to Top