5 ಮತ್ತು 8ನೇ ತರಗತಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.25. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಯಿಂದ 5 ಮತ್ತು 8ನೇ ತರಗತಿಯ ವಾರ್ಷಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ಮಾರ್ಚ್ 13ರಿಂದ 5 ಮತ್ತು 8ನೇ ತರಗತಿಯ ಪರೀಕ್ಷೆಗಳು ಆರಂಭಗೊಳ್ಳಲಿವೆ.

ದಿನಾಂಕ 06-03-2023ಯ ಸೋಮವಾರದಿಂದ ದಿನಾಂಕ 10-03-2023ರ ಶುಕ್ರವಾರದವರೆಗೆ ವಿದ್ಯಾರ್ಥಿಗಳಿಗೆ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಿರ್ವಹಿಸಲಾಗುತ್ತದೆ. ವಿಶೇಷ ಶಾಳೆಗಳ ವಿದ್ಯಾರ್ಥಿಗಳಿಗೆ ಮಂಡಲಿಯಿಂದ ಸರಬರಾಜು ಮಾಡುವ ಪ್ರಶ್ತೋತ್ತರ ಪತ್ರಿಕೆಗಳನ್ನೇ ಬಳಸಿ, ಶಾಲಾ ಹಂತದಲ್ಲಿ ಹಿಂದಿನ ಸಾಲುಗಳಲ್ಲಿ ನಡೆಸಿದಂತೆ ಮೌಲ್ಯಾಂಕನ ನಡೆಸುವುದು ಎಂದು ತಿಳಿಸಿದೆ.

error: Content is protected !!

Join the Group

Join WhatsApp Group