➤ ಶಿವಮೊಗ್ಗದಲ್ಲಿ ಇಂದು ಪ್ರಧಾನಿಯವರಿಂದ ವಿಮಾನ ನಿಲ್ದಾಣ ಉದ್ಘಾಟನೆ

(ನ್ಯೂಸ್ ಕಡಬ) newskadaba.com. ಶಿವಮೊಗ್ಗ. ಫೆ.27.ಶಿವಮೊಗ್ಗದಲ್ಲಿ  ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆ.27 ರಂದು ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ.  ಹಾಗೂ ಇತರೆ ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಪ್ರಧಾನಿಯವರು ನೆರವೇರಿಸುವರು.

ಪ್ರಧಾನಿಯವರ ಕಾರ್ಯಕ್ರಮಕ್ಕೆ 1 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 2 ಕಡೆ ಊಟದ ವ್ಯವಸ್ಥೆ ಇದ್ದು ಒಂದೊಂದು ಕಡೆ 100 ಕೌಂಟರ್‍ಗಳನ್ನು ತೆರೆಯಲಾಗುವುದು. ಕಾರ್ಯಕ್ರಮದ ವೀಕ್ಷಣೆಗೆ 4 ಕಡೆ ವಿಶಾಲವಾದ ಪ್ರಾಜೆಕ್ಟರ್‍ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ 449.22 ಕೋಟಿ ರೂ. ವೆಚ್ಚದಲ್ಲಿ ಎಟಿಆರ್ 72 ರಿಂದ ಏರ್‍ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು-ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ 3.2 ಕಿ.ಮೀ ರನ್‍ವೇ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳೊಂದಿಗೆ ನಿರ್ಮಿಸಲಾಗಿದೆ.

Also Read  ನ.14ರಂದು( ನಾಳೆ) ಬಿಳಿನೆಲೆಯಲ್ಲಿ ದಿ| ಗೋಪಾಲರಾವ್ ರವರ ನುಡಿನಮನ ಕಾರ್ಯಕ್ರಮ

ಒಟ್ಟು896.16 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ನಿರ್ಮಾಣಗೊಂಡಿರುವ 44 ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ ಇದೇ ವೇಳೆ ನಡೆಯಲಿದೆ. ಶಿಮುಲ್ ಶಿವಮೊಗ್ಗ ಕೇಂದ್ರ ಡೇರಿ ಆವರಣದಲ್ಲಿ ರೂ.45 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರೂ.2 ಲಕ್ಷ ಲೀಟರ್ ಸಾಮರ್ಥ್ಯ ದ ಹಾಲು, ಮೊಸರು ಮತ್ತು ಮಜ್ಜಿಗೆ ಪ್ಯಾಕಿಂಗ್ ಘಟಕ ಕಟ್ಟಡ ಉದ್ಘಾಟನ ಹಾಗೂ ನಗರದ ಎಪಿಎಂಸಿ ಆವರಣದಲ್ಲಿ ರೂ.8 ಕೋಟಿ ವೆಚ್ಚಲ್ಲಿ ನಿರ್ಮಿಸಿರುವ ಮ್ಯಾಮ್‍ಕೋಸ್‍ನ 4 ಅಂತಸ್ತುಗಳ ಆಡಳಿತ ಕಚೇರಿ ಕಟ್ಟಡ ಉದ್ಘಾಟನೆ ನಡೆಯಲಿದೆ ಎಂದು ತಿಳಿದು ಬಂದಿದೆ.

Also Read  ಪುತ್ತೂರು: ಹರಳಿಂಡಿ ಸಾಗಾಟದ ಲಾರಿ ಪಲ್ಟಿ

 

error: Content is protected !!
Scroll to Top