➤ ವಾಲಿಬಾಲ್ ಆಡುವಾಗ ಕುಸಿದು ಬಿದ್ದು ಯುವಕ ಮೃತ್ಯು.!

(ನ್ಯೂಸ್ ಕಡಬ) newskadaba.com. ಕಾರ್ಕಳ.  ಫೆ.27.  ವಾಲಿಬಾಲ್ ಆಟವಾಡುವಾಗ ಕುಸಿದು ಬಿದ್ದು,ಯುವಕ ಮೃತಪಟ್ಟ ಘಟನೆ ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಬಳಿ ನಡೆದಿದೆ.

ಸಂತೋಷ (34) ಮೃತ ದುರ್ದೈವಿ. ಸಂತೋಷ್ ನಿನ್ನೆ ಸಂಜೆ ವಾಲಿಬಾಲ್‌ ಆಡುತ್ತಿರುವಾಗ ಮೈದಾನದಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಈ ವೇಳೆ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

error: Content is protected !!