➤ ವಾಯುಪಡೆ ಅಧಿಕಾರಿ ಪುತ್ರನ ಕಾರು ಡಿಕ್ಕಿ ಹೊಡೆದು 3 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com. ದೆಹಲಿ .  ಫೆ.28. ಮಗುವಿನ ಮೇಲೆ ಕಾರು ಹತ್ತಿಸಿ ಹತ್ಯೆ ಮಾಡಿದ್ದ ಆರೋಪದ ಮೇರೆಗೆ ವಾಯುಪಡೆ ಅಧಿಕಾರಿಯೊಬ್ಬರ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸಾವನ್ನಪ್ಪಿತ್ತು, ಸಮರ್ಕ್ ಮಲಿಕ್ (20) ಭಾರತೀಯ ವಾಯುಪಡೆಯ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಭರತ್ ಮಲಿಕ್ ಅವರ ಪುತ್ರ  ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಮಗುವಿನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಗ್ರೂಪ್ ಕ್ಯಾಪ್ಟನ್ ಮಗನನ್ನು ಬಂಧಿಸಿದ್ದಾರೆ.

Scroll to Top