ಫೆ. 28: ಇಂದು ನಗರಾಭಿವೃದ್ಧಿ ಸಚಿವರ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 28. ನಗರಾಭಿವೃದ್ಧಿ ಸಚಿವರಾದ ಬಿ.ವಿ. ಬಸವರಾಜ(ಬೈರತಿ) ಅವರು ಫೆ.28ರ ಮಂಗಳವಾರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಫೆ.28ರ ಮಂಗಳವಾರ ಬೆಳಿಗ್ಗೆ 8.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 9 ಗಂಟೆಗೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಾಡಿಗೆ ತಲುಪುವರು. ನಂತರ ಬೆಳಿಗ್ಗೆ 10 ಗಂಟೆಯಿಂದ ಆಲಾಡಿಯಲ್ಲಿ ಬಂಟ್ವಾಳ ತಾಲೂಕು ಹಾಗೂ ಮಂಗಳೂರು ತಾಲೂಕಿಗೆ ಸಗಟು ಕುಡಿಯುವ ನೀರು ಸರಬರಾಜು ಮಾಡಲು ನಿರ್ಮಾಣಗೊಂಡ ಜಾಕ್‍ವೆಲ್ ಕಂ ಪಂಪ್‍ಹೌಸ್ ಆವರಣದಲ್ಲಿ ಕಾಮಗಾರಿ ಪರಿವೀಕ್ಷಣೆ ಹಾಗೂ ಪೈಪ್ ಲೈನ್ ಅಳವಡಿಸಲು ಇರುವ ಸಮಸ್ಯೆಗಳ ಬಗ್ಗೆ ಚರ್ಚಿಸುವರು. ಅಲ್ಲಿಂದ ಮಧ್ಯಾಹ್ನ 1.30ಕ್ಕೆ ನಗರದ ಸರ್ಕ್ಯೂಟ್ ಹೌಸ್ ಭೇಟಿ ನೀಡಿ ಮಧ್ಯಾಹ್ನ 3ರಿಂದ ಸರ್ಕ್ಯೂಟ್ ಹೌಸ್‍ನಲ್ಲಿ ಮಂಗಳೂರು ಮಹಾನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಸ್ಮಾರ್ಟ್ ಸಿಟಿಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. ಸಂಜೆ 6.45ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು ಬೆಂಗಳೂರು ತಲುಪುವರು ಎಂದು  ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಅಡಿಕೆ ಬೆಳೆಗಾರರ ಹಿತರಕ್ಷಣೆ ಮಾಡುವಲ್ಲಿ ಕ್ಯಾಂಪ್ಕೊ ಯಶಸ್ವಿ ➤ ಸತೀಶ್ಚಂದ್ರ

error: Content is protected !!
Scroll to Top