ಪ್ರಿಂಟಿಂಗ್ ಏಜೆನ್ಸಿ ಮಾಲೀಕನ ಕೊಚ್ಚಿ ಕೊಲೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.28. ಲಕ್ಷಗಟ್ಟಲೆ ಪಡೆದ ಸಾಲ ವಾಪಸ್ ಕೊಡದ ವಿಚಾರದ ಹಿನ್ನೆಲೆಯಲ್ಲಿ ನಡೆದ ಗಲಾಟೆಯಲ್ಲಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಜಾಹೀರಾತು ಪ್ರಿಂಟಿಂಗ್ ಏಜೆನ್ಸಿ ಮಾಲೀಕರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ದಾರುಣ ಘಟನೆ ನಾಯಂಡಹಳ್ಳಿ ಚೆಟ್ಟೀಸ್ ಪೆಟ್ರೋಲ್ ಬಂಕ್ ಹಿಂಭಾಗ ನಿನ್ನೆ ಮಧ್ಯರಾತ್ರಿ ನಡೆದಿದೆ.

ಚಂದ್ರ ಲೇಔಟ್ ನ ಮೊದಲ ಹಂತದ ದುರ್ಗಾಪರಮೇಶ್ವರಿ ದೇವಸ್ಥಾನ ಬಳಿಯ ಲಿಯಾಖತ್ ಅಲಿಖಾನ್ (44) ಕೊಲೆಯಾದವರು ಎಂದು ಪಶ್ಚಿಮ ವಿಭಾಗದ ಡಿಸಿಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

 

Scroll to Top