ಮಂಗಳೂರು: ಅಕ್ರಮ ಮರಳು ಸಾಗಾಟ; ವಾಹನಗಳು ವಶಕ್ಕೆ  

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.01. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನಗಳ ಮೇಲೆ ಪೊಲೀಸರು ದಾಳಿ ನಡೆಸಿ ಮರಳು ಸಾಗಾಟಕ್ಕೆ ಬಳಸಿದ ಟಿಪ್ಪರ್ ಹಾಗೂ ಲಾರಿಗಳನ್ನು ಮತ್ತು ಮರಳನ್ನು ವಶಪಡಿಸಿಕೊಂಡಿದ್ದಾರೆ.

ಫೆಬ್ರವರಿ 25ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್‌ಪಿಎಲ್ ಮೇಲ್ಸೇತುವೆ ಬಳಿ ಸುಮಾರು 10 ಟನ್ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

 

 

Scroll to Top