(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.02. ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ನಗರ ಪೊಲೀಸರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಎಸ್.ಜೆ. ಪಾರ್ಕ್ ಪೊಲೀಸರು ನಾಕಾಬಂಧಿ ವಾಹನ ತಪಾಸಣೆ ವೇಳೆ ಬರೋಬ್ಬರಿ 6.5 ಕೆಜಿ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸಲು ಯತ್ನಿಸಿದ ನಿಕುಂಜ್ ಬಾಬಿಲ್ ಎಂಬಾತನನ್ನು ಹಿಡಿದು 6.5 ಕೆಜಿ ಚಿನ್ನಾಭರಣ ವಶಕ್ಕೆ ಪಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.