(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಕರಣಿಕನಿಗೆ ಮಂಗಳೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿರುವ ಘಟನೆ ನಡೆದಿದೆ. ಶಿಕ್ಷೆಗೊಳಗಾದವರನ್ನು ಎಸ್. ಮಹೇಶ್ ಎಂದು ಗುರುತಿಸಲಾಗಿದೆ.
ಸುಳ್ಯ ಮಂಡೆಕೋಲಿನ ಗೋಪಾಲಕೃಷ್ಣ ಅವರ ಅಕ್ರಮ ಸಕ್ರಮದ ಅರ್ಜಿ ವಿಲೇವಾರಿಗೆ 60,000 ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, 2016ರ ಜೂ. 7ರಂದು 45,000 ರೂ.ಗಳನ್ನು ಲಂಚದ ಹಣವಾಗಿ ಸ್ವೀಕರಿಸುವ ಸಂದರ್ಭ ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಬಂಧಿಸಿದ್ದರು.