ಜ್ಯುವೆಲ್ಲರಿಗೆ ನುಗ್ಗಿ ದರೋಡೆ – ಕೊಲೆ ಪ್ರಕರಣ..! ➤ ಒಂದು ತಿಂಗಳ ಬಳಿಕ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. ಹಂಪನಕಟ್ಟೆಯಲ್ಲಿನ ಜ್ಯುವೆಲ್ಲರಿಗೆ ನುಗ್ಗಿ ದರೋಡೆ – ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 1 ತಿಂಗಳ ಬಳಿಕ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


ಕೋಝಿಕ್ಕೋಡ್ ಕೊಯಿಲಾಂಡಿಯ ಶಿಫಾಝ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ.
ಅತ್ತಾವರದ ನಿವಾಸಿ ರಾಘವ(50) ಎಂಬವರನ್ನು ಚೂರಿಯಿಂದ ಇರಿದು ಕೊಲೆಗೈದು ದರೋಡೆ ಮಾಡಿಕೊಂಡು ಮುಸುಕುದಾರಿ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.

Scroll to Top