ಟೆಂಪೊ ಮತ್ತು ಸ್ಕೂಟರ್ ನಡುವೆ ಅಪಘಾತ..! ➤ ಓರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. 407 ಟೆಂಪೊ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕರಾವಳಿ ಬೈಪಸ್ ನಲ್ಲಿ ವರದಿಯಾಗಿದೆ. ಗಣಪತಿ ಪೈ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.


ಗಣಪತಿಯವರು ಕರಾವಳಿ ಬೈಪಸ್ ನಿಂದ ಸಂತೆಕಟ್ಟೆಯತ್ತ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಟೆಂಪೋಗೆ ಡೀಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top