➤ ಕಾಲೇಜು ಆವರಣದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com.ಕೊಡಗು, ಮಾ 4.  ಹೈದರಾಬಾದ್, ಮಾ 04 ಕಾಲೇಜಿನಲ್ಲಿ ಊಟ ಮುಗಿಸಿ, ಮೊದಲ ತರಗತಿಯನ್ನು ಮುಗಿಸಿ ಸ್ನೇಹಿತನೊಟ್ಟಿಗೆ ಕಾಲೇಜಿನ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ತೆಲಂಗಾಣದ ಗುಂಡ್ಲಾ ಪೋಚಂಪಲ್ಲಿಯಲ್ಲಿರುವ ಎಂಆರ್ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರ್‌ ವಿದ್ಯಾರ್ಥಿ ಸಚಿನ್‌ (18) ಮೃತ ದುರ್ದೈವಿ. ಸ್ನೇಹಿತನೊಟ್ಟಿಗೆ ಕಾಲೇಜಿನ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸಚಿನ್‌ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದಾಗಲೇ ಅವರು ಕಾರ್ಡಿಯಕ್ ಅರೆಸ್ಟ್ ನಿಂದ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಇನ್ನು ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಿದ್ದು, ಸ್ನೇಹಿತರು ಸೇರಿದಂತೆ ಕಾಲೇಜಿನ ವಿದ್ಯಾರ್ಥಿ ವರ್ಗ ಸಚಿನ್‌ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ

Scroll to Top