ಮಾರ್ಚ್ 31ರೊಳಗೆ ‘ಆಧಾರ್’ ಜೊತೆ ‘ಪಾನ್’ ಲಿಂಕ್ ಮಾಡುವುದು ಕಡ್ಡಾಯ..!    

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.06. ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡುವ ಕುರಿತಂತೆ ಈಗಾಗಲೇ ಆದಾಯ ತೆರಿಗೆ ಇಲಾಖೆ ಹಲವು ಬಾರಿ ಸೂಚನೆಗಳನ್ನು ನೀಡಿದೆ. ಅಲ್ಲದೆ ದಿನಾಂಕಗಳನ್ನು ಸಹ ಈ ಹಿಂದೆ ಮುಂದೂಡಲಾಗಿದ್ದು, ಇದೀಗ 31 ಮಾರ್ಚ್ 2023 ಕೊನೆಯ ದಿನಾಂಕವಾಗಿದೆ ಎಂದು ವರದಿ ತಿಳಿಸಿದೆ.

ಪಾನ್ ಜೊತೆ ಆಧಾರ್ ಲಿಂಕ್ ಮಾಡಲು ರೂ.1000 ವಿಳಂಬ ಶುಲ್ಕ ಪಾವತಿಸಬೇಕಾಗುತ್ತದೆ. ಜೊತೆಗೆ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆಧಾರ್ ಜೊತೆ ಪಾನ್ ಲಿಂಕ್ ಮಾಡದಿದ್ದರೆ ನಿಮ್ಮ ಪಾನ್ ಕಾರ್ಡ್ ನಿಷ್ಕ್ರಿಯಗೊಳ್ಳಬಹುದು ಎಂದು ವರದಿ ತಿಳಿಸಿದೆ.

 

Scroll to Top