ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಶಂಕಿತ ಉಗ್ರ ಶಾರೀಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 06. ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡಿದ್ದ ಶಂಕಿತ ಉಗ್ರ ಶಾರಿಕ್ ಚೇತರಿಸಿಕೊಂಡಿದ್ದು, ಆತನನ್ನು ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಆಟೋದಲ್ಲಿ ಕುಕ್ಕರ್​ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ಶಾರಿಕ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ಇದೀಗ ಶಂಕಿತ ಉಗ್ರ ಶಾರಿಕ್​ ಚೇತರಿಸಿಕೊಂಡಿದ್ದು, ಎರಡೂವರೆ ತಿಂಗಳ ಬಳಿಕ ಶಾರಿಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಮಾಡಲಾಗಿದೆ. ಶಾರಿಕ್ ಸಂಪೂರ್ಣವಾಗಿ ಗುಣಮುಖನಾಗಿದ್ದು ಸದ್ಯ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

Also Read  ಉಡುಪಿ: 33 ಕೆಜಿ ಗಾಂಜಾ ನಾಶಪಡಿಸಿದ ಪೊಲೀಸರು

error: Content is protected !!
Scroll to Top