➤ ಒಡಿಶಾದ ಖುರ್ದಾದಲ್ಲಿ ಪಟಾಕಿ ಸ್ಫೋಟ; ನಾಲ್ವರು ಮೃತ್ಯು..!

(ನ್ಯೂಸ್ ಕಡಬ) newskadaba.com. ಭುವನೇಶ್ವರ ಮಾ 06.  ಒಡಿಶಾದ ಖುರ್ದಾದ ತಂಗಿ ಪೊಲೀಸ್ ವ್ಯಾಪ್ತಿಯ ಭೂಶುಂದಪುರ ಗ್ರಾಮದ ಬಳಿ ಪಟಾಕಿ ತಯಾರಿಕೆ ಘಟಕದಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಮೃತರೆಲ್ಲರೂ ಪುರುಷರಾಗಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಖುರ್ದಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಕಟಾರಿಯಾ ತಿಳಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಖುರ್ದಾ ಜಿಲ್ಲಾ ಪ್ರಧಾನ ಆಸ್ಪತ್ರೆಗೆ (ಡಿಎಚ್‌ಹೆಚ್) ದಾಖಲಿಸಲಾಗಿದೆ ಅವರಲ್ಲಿ ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಶೀಘ್ರದಲ್ಲೇ ಭುವನೇಶ್ವರದ ಏಮ್ಸ್‌ಗೆ ದಾಖಲಿಸಲಾಗುವುದು ಎಂದು ಕಟಾರಿಯಾ ಹೇಳಿದ್ದರಾರೆ.

Scroll to Top