ಕಾಂಗ್ರೆಸ್‌ನ 200 ಯುನಿಟ್‌ ಫ್ರೀ ವಿದ್ಯುತ್‌ ಮೋಸದ ಸ್ಕೀಂ       ➤  ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.07. ‘ಪ್ರತಿ ತಿಂಗಳು 200 ಯುನಿಟ್‌ ವರೆಗೆ ಉಚಿತ ಗೃಹ ಬಳಕೆ ವಿದ್ಯುತ್‌ ನೀಡುವುದಾಗಿ ಕಾಂಗ್ರೆಸ್‌ ಹೇಳಿದೆ. ಆದರೆ, ಈ ಘೋಷಣೆಯಲ್ಲೇ ಮೋಸ ಇದೆ. ಗೃಹ ಬಳಕೆ ವಿದ್ಯುತ್‌ 60-70 ಯುನಿಟ್‌ಗಿಂತ ಹೆಚ್ಚಾಗಿ ಬಳಕೆಯೇ ಆಗುವುದಿಲ್ಲ.

ಹೀಗಿದ್ದರೂ 200 ಯುನಿಟ್‌ವರೆಗೆ ಉಚಿತ ಎಂದು ಹೇಳುವುದು ಜನರಿಗೆ ಏಮಾರಿಸಿದಂತೆ ಅಲ್ಲವೇ?’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ. ಬೆಸ್ಕಾಂ ವತಿಯಿಂದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಸ್ಕಾಂ ನಿರ್ಮಿಸಿರುವ 17 ನೂತನ ಕಟ್ಟಡಗಳ ಉದ್ಘಾಟನೆ ನಡೆಸಿ ಅವರು ಮಾತನಾಡಿದರು.

 

Scroll to Top