ಮದ್ಯ ಸೇವಿಸಿ ಆಸ್ಪತ್ರೆಯಲ್ಲೇ ಮಲಗಿದ ವೈದ್ಯ !

(ನ್ಯೂಸ್ ಕಡಬ)newskadaba.com ತುಮಕೂರು, ಮಾ.07. ತಿಪಟೂರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯರೊಬ್ಬರು ಪಾನಮತ್ತರಾಗಿ ಮಲಗಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಸೋಮವಾರ ಮಧ್ಯಾಹ್ನ ಹೊರ ರೋಗಿಗಳು ಚಿಕಿತ್ಸೆಗಾಗಿ ಕಾಯುತ್ತಿದ್ದಾಗಲೇ ದಂತ ವಿಭಾಗದ ಡಾ.ಜಯಪ್ರಕಾಶ್ ಮದ್ಯಪಾನ ಮಾಡಿ ಟೇಬಲ್ ಮೇಲೆ ಕಾಲಿಟ್ಟು ಕುರ್ಚಿಯಲ್ಲಿಯೇ ಮಲಗಿದ್ದರು.

Scroll to Top