ಸುರತ್ಕಲ್: ಬೈಕ್ ಅಪಘಾತ..! ➤ ಹಿಂಬದಿ ಸವಾರ ರಸ್ತೆಗೆ ಎಸೆಯಲ್ಪಟ್ಟು ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಮಾ.07. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯವ ಎನ್ಐಟಿಕೆ ಟೊಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.


ಮೃತ ಯುವಕನನ್ನು ಮಡಿಕೇರಿ ಸೋಮವಾರಪೇಟೆ ಬಿಟಿ ಕಟ್ಟೆಯ ನಿವಾಸಿ ಶಶಾಂಕ್(21) ಎಂದು ತಿಳಿದು ಬಂದಿದೆ. ಸುರತ್ಕಲ್ ಟೋಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿದ್ದು, ಬೈಕ್ ನ ಹಿಂಬದಿ ಸವಾರರಾಗಿ ತೆರಳಿತ್ತಿದ್ದ ಇವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Scroll to Top