ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ➤ ದ.ಕ ಜಿಲ್ಲೆಯಲ್ಲಿ 52 ಪರೀಕ್ಷಾ ಕೆಂದ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 08. ದ.ಕ.ಜಿಲ್ಲೆಯಲ್ಲಿ ನಾಳೆಯಿಂದ (ಮಾ. 09) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ದ.ಕ. ಜಿಲ್ಲೆಯಲ್ಲಿ 52 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆ ಬರೆಯಲು ಜಿಲ್ಲೆಯ 34,340 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ. ಪರೀಕ್ಷೆಯು ಬೆಳಗ್ಗೆ 10:15ಕ್ಕೆ ಆರಂಭಗೊಂಡು 1:15ಕ್ಕೆ ಮುಕ್ತಾಯಗೊಳ್ಳಲಿದೆ.
ರೆಗ್ಯುಲರ್ 15,171 (ಬಾಲಕರು), 16,051 (ಬಾಲಕಿಯರು) ಸಹಿತ 31,222 ಮತ್ತು ಖಾಸಗಿ 1,342 (ಬಾಲಕರು), 674 ಬಾಲಕಿಯರು ಸಹಿತ 2,016 ಹಾಗೂ ಪುನರಾವರ್ತಿತ 733 (ಬಾಲಕರು), 369 (ಬಾಲಕಿಯರು) ಸಹಿತ 1,102 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ.

ಮಂಗಳೂರು ತಾಲೂಕಿನಲ್ಲಿ 18, ಬಂಟ್ವಾಳದಲ್ಲಿ 6, ಪುತ್ತೂರಿನಲ್ಲಿ 5, ಬೆಳ್ತಂಗಡಿಯಲ್ಲಿ 6, ಸುಳ್ಯದಲ್ಲಿ 2, ಮೂಡುಬಿದಿರೆಯಲ್ಲಿ 4, ಕಡಬದಲ್ಲಿ 5, ಮುಲ್ಕಿಯಲ್ಲಿ 2, ಉಳ್ಳಾಲ ತಾಲೂಕಿನಲ್ಲಿ 4 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಸರಕಾರಿ 15, ಅನುದಾನಿತ 21, ಅನುದಾನರಹಿತ 16 ಕಾಲೇಜುಗಳಲ್ಲಿ ಈ ಕೇಂದ್ರಗಳನ್ನು ತೆರೆಯಲಾಗಿದೆ.
ಮಾ. 09ರಂದು ಕನ್ನಡ ಮತ್ತು ಅರಬಿಕ್, ಮಾ.11ರಂದು ಗಣಿತ ಶಾಸ್ತ್ರ ಮತ್ತು ಶಿಕ್ಷಣ ಶಾಸ್ತ್ರ, ಮಾ.13ರಂದು ಅರ್ಥಶಾಸ್ತ್ರ, ಮಾ.14ರಂದು ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ, ಮಾ.15ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮಾ.16ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮಾ.17ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಅಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್, ಮಾ.18ರಂದು ಭೂಗೋಳಶಾಸ್ತ್ರ, ಜೀವಶಾಸ್ತ್ರ, ಮಾ.20ರಂದು ಇತಿಹಾಸ, ಭೌತಶಾಸ್ತ್ರ, ಮಾ.21ರಂದು ಹಿಂದಿ, ಮಾ.23ರಂದು ಇಂಗ್ಲಿಷ್, ಮಾ.25ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾ.27ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ, ಮಾ.29ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಎಲ್ಲಾ ಸಿದ್ಧತೆಗಳು ನಡೆದಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Also Read  ನಾಳೆಯಿಂದ ಲೋಕಾಯುಕ್ತರ ದ.ಕ ಜಿಲ್ಲಾ ಪ್ರವಾಸ

error: Content is protected !!
Scroll to Top