ದೇಶದ ಮೊದಲ ತೃತೀಯಲಿಂಗಿ ದಂಪತಿಯ ಮಗುವಿಗೆ ನಾಮಕರಣ



(ನ್ಯೂಸ್ ಕಡಬ) newskadaba.com ಕೇರಳ, ಮಾ. 09. ಇತ್ತೀಚೆಗಷ್ಟೇ ಮಗುವೊಂದಕ್ಕೆ ಜನ್ಮ ನೀಡಿದ್ದ ಕೋಝಿಕ್ಕೋಡ್ ನ ತೃತೀಯಲಿಂಗಿ ದಂಪತಿ ಜಿಯಾ ಮತ್ತು ಜಹಾದ್ ಇದೀಗ ಮಗುವಿಗೆ ನಾಮಕರಣ ಮಾಡಿದ್ದಾರೆ.







ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಜಹಾದ್ ಹಾಗೂ ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾ ದಂಪತಿಗೆ ಹೆಣ್ಣು ಮಗು ಜನಿಸಿತ್ತು. ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಜಹ್ಹಾದ್ ಗೆ ಕಳೆದ ಫೆ. 02ರಂದು ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಅಂದು ಮಗುವಿನ ಲಿಂಗ ಗುರುತನ್ನು ಬಹಿರಂಗಪಡಿಸಲು ನಿರಾಕರಿಸಿದ್ದ ದಂಪತಿ ಇದೀಗ ಮಗುವಿಗೆ ಜಬಿಯಾ ಸಹದ್ ಎಂದು ನಾಮಕರಣ ಮಾಡಿದ್ದಾರೆ. ಜಿಯಾ ಓರ್ವ ನರ್ತಕಿಯಾಗಿದ್ದು, ಜಹ್ಹಾದ್ ಖಾಸಗಿ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿದ್ದಾರೆ.






error: Content is protected !!
Scroll to Top