(ನ್ಯೂಸ್ ಕಡಬ) newskadaba.com ಕಾಸರಗೋಡು, ಮಾ. 09. ಆಟವಾಡಲು ತೆರಳಿದ್ದ ವಿದ್ಯಾರ್ಥಿಯೋರ್ವ ಶಾಲಾ ಸಮೀಪ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ಬೇಡಡ್ಕ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಬಾಲಕನನ್ನು ಕುಂಡಂಗುಳಿ ನಿವಾಸಿ ವಿನೋದ್ ಎಂಬವರ ಪುತ್ರ ಅಭಿನವ್ (17)ದು ಗುರುತಿಸಲಾಗಿದೆ. ಅಭಿನವ್ ಶಾಲೆಯಿಂದ ಮನೆಗೆ ಬಂದು ಸಂಜೆ ಆಟವಾಡಲು ಹೋಗುವುದಾಗಿ ಹೇಳಿ ಹೋಗಿದ್ದ. ಆ ಬಳಿಕ ಸಂಜೆಯಾದರೂ ಮನೆಗೆ ವಾಪಸ್ ಬಾರದ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆ ಸಮೀಪದ ಶಾಲೆಯ ಹಿಂದೆ ನೇಣು ಬಿಗಿದ ಸ್ಥಿತಿಯಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ.