ಬಂಟ್ವಾಳ: 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

crime, arrest, suspected

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 10. ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಂತರ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.

ಬಂಧಿತ ಆರೋಪಿಯನ್ನು ಹಾಸನದ ಬಿಕ್ಕೋಡು ನಿವಾಸಿ ರಮೇಶ್ ಎಂದು ಗುರುತಿಸಲಾಗಿದೆ. ಈತನ ವಿರುದ್ದ ಬಂಟ್ವಾಳ ಗ್ರಾಮಂತರ ಪೊಲೀಸ್ ಠಾಣಾ ಅ.ಕ್ರ : 85/2019 U/s 354(A),448,506, IPC ಮಾನ್ಯ ACJ & JMFC Bantwal c c no1020/2020 ರಡಿ ಪ್ರಕರಣ ದಾಖಲಾಗಿತ್ತು. ಮಾ. 08ರಂದು ಈತನ ಕುರಿತು ಲಭಿಸಿದ ಮಾಹಿತಿಯಂತೆ ಪೊಲೀಸ್ ನಿರೀಕ್ಷಕರ ಹಾಗೂ ಪೊಲೀಸ್ ಉಪ ನಿರೀಕ್ಷರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಹೆಚ್.ಸಿ, ಪಿ.ಸಿ, ಪುನೀತ್ ಪಿ.ಸಿ, ಯೋಗೀಶ್ ರವರು ಹಾಸನದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Also Read  ಉಪ್ಪಿನಂಗಡಿ: ಬೈಕ್ - ಮಿನಿ ಟೆಂಪೋ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

error: Content is protected !!
Scroll to Top