24 ಗಂಟೆಯೊಳಗೆ ಕರಾವಳಿಯ ಕೆಲವಡೆ ಬಿಸಿಗಾಳಿ ಬೀಸುವ ಸಾಧ್ಯತೆ ➤ ಹವಾಮಾನ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 10. ಕರಾವಳಿ ಜಿಲ್ಲೆಗಳಾದ ದ.ಕ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ  24 ಗಂಟೆ ಅವಧಿಯಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕಳೆದೆರಡು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಿದ್ದು, ಇದರ ಬೆನ್ನಲ್ಲೇ ಇದೀಗ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ಮಾ. 13 ಮತ್ತು 14ರಂದು ಉತ್ತರ ಕನ್ನಡ, ಉಡುಪಿ ಮತ್ತು ಒಳನಾಡು ಪ್ರದೇಶಗಳಾದ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

Scroll to Top