(ನ್ಯೂಸ್ ಕಡಬ) newskadaba.com ಸವಣೂರು, ಮಾ. 10. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ “523ನೇ ನಮ್ಮೂರು ನಮ್ಮ ಕೆರೆ” ಕೆರೆಯ ಹೂಳೆತ್ತುವ ಕಾರ್ಯಕ್ರಮದ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರಾಜೀವಿಯವರು ವಹಿಸಿದ್ದರು. ಹಾಗೂ ಇದರ ಉದ್ಘಾಟನೆಯನ್ನು ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾ ಸಂಸ್ಥೆಗಳ ಸಂಚಾಲಕರಾದ ಸೀತಾರಾಮ ರೈ ಅವರು ನೆರವೇರಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡ ಜಿಲ್ಲೆ ಇದರ ನಿರ್ದೇಶಕರು ಕೆರೆ ಕಾಮಗಾರಿಯ ಕುರಿತು ಮಾಹಿತಿ ಮಾರ್ಗದರ್ಶನ ನೀಡಿದರು. ಈ ಸಂದರ್ಭದಲ್ಲಿ ಕೆರೆ ಸಮಿತಿ ಅಧ್ಯಕ್ಷರಾದ ಗಿರಿಶಂಕರ ಸುಲಾಯ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶೀನಪ್ಪ ಶೆಟ್ಟಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮನ್ಮಥ, ಕೆರೆ ಸಮಿತಿ ಕೋಶಾಧಿಕಾರಿ ಮಹೇಶ್ ಸವಣೂರು, ಉಪಾಧ್ಯಕ್ಷರಾದ ನಾರಾಯಣ ಗೌಡ ಪೂವ, ಕೆರೆ ಸಮಿತಿಯ ಪದಾಧಿಕಾರಿಗಳು ಸದಸ್ಯರು ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಒಕ್ಕೂಟದ ಸದಸ್ಯರು ಸ್ಥಳೀಯರು ಉಪಸ್ಥಿತರಿದ್ದರು. ತಾಲೂಕಿನ ಯೋಜನಾಧಿಕಾರಿ ಮೇದಪ್ಪ ಎನ್ ಸ್ವಾಗತಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಚೇತನ ಕಾರ್ಯಕ್ರಮ ನಿರೂಪಿಸಿದರು, ಮನ್ಮಥರವರು ಧನ್ಯವಾದ ಸಮರ್ಪಿಸಿದರು.






